Latest

ಆಸ್ಪತ್ರೆಗೆ ದಾಖಲಾಗಿರುವ ರಾಘವೇಂದ್ರ ರಾಜ್ ಕುಮಾರ್; ಆಸ್ಪತ್ರೆ ಸುತ್ತ ಕೆ ಎಸ್ ಆರ್ ಪಿ ತುಕಡಿ ನಿಯೋಜನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಘಣ್ಣನನ್ನು ನೋಡಲು ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಸೇರಿದಂತೆ ಕುಟುಂಬಸ್ಥರು ದೌಡಾಯಿಸಿದ್ದಾರೆ.

ಬೆಳಕು ಚಿತ್ರದ ಚಿತ್ರೀಕರಣದ ವೇಳೆ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ರಾಘಣ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ನಡುವೆ ಆಸ್ಪತ್ರೆಗೆ ಅಭಿಮಾನಿಗಳು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಆಸ್ಪತ್ರೆ ಸುತ್ತ ಭದ್ರತೆಗಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button