*ರ್ಯಾಗಿಂಗ್ ಬಗ್ಗೆ ದೂರು ನೀಡಿದ್ದಕ್ಕೆ ಪ್ರಾಧ್ಯಾಪಕರು ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ: 20 ಜನರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಸೀನಿಯರ್ ವಿದ್ಯಾರ್ಥಿಗಳು ಜ್ಯೂನಿಯರ್ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ಮಾಡಿದ್ದಕ್ಕೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದ್ದಕ್ಕೆ ಪ್ರಾಧ್ಯಾಪಕರು, ಸಿಇಬ್ಬಂದಿಗಳು, ಕಿರಿಯ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳು ರೌಡಿಗಳಂತೆ ಹೊಡೆದು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಪ್ರತಿಷ್ಠಿತ ಆಕಾಶ್ ಗ್ರೂಪ್ ಆಫ್ ಇನ್ಸ್ ಟಿಟ್ಯೂಟ್ ನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನಲ್ಲಿ ಸೀನಿಯರ್ ವಿದ್ಯಾರ್ಥಿಗಳು ಜ್ಯೂನಿಯರ್ ವಿದ್ಯಾರ್ಥಿಗಳಿಗೆ ಎಣ್ಣೆ, ಸಿಗರೇಟ್ಸ್ ತೆಗೆದುಕೊಂಡು ಬರುವಂತೆ ಆವಾಜ್ ಹಾಕುತ್ತಿದ್ದರು. ಸೀನಿಯರ್ಸ್ ಹೇಳಿದಂತೆ ಕೇಳದಿದ್ದಕ್ಕೆ ಹಲ್ಲೆ ನಡೆಸಿದ್ದರು. ರ್ಯಾಗಿಂಗ್ ನಿಂದ ಬೇಸತ್ತ ಕಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಆಡಳಿತಮಂಡಳಿಗೆ ದೂರು ನೀಡಿದ್ದರು. ದೂರು ನೀಡಿದ್ದಕ್ಕೆ ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಮತ್ತಷ್ಟು ಹಲ್ಲೆ ಮಾಡಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಕಾಲೇಜು ಆಡಳಿತ ಮಂಡಳಿಯ ಸಿಬ್ಬಂದಿಗಳು , ಪ್ರಾಧ್ಯಾಪಾಕರ ಮೇಲೂ ರೌಡಿಗಳಂತೆ ಅಟ್ಟಹಾಸ ಮೆರೆದಿದ್ದಾರೆ.
ಹಿರಿಯ ವಿದ್ಯಾರ್ಥಿಗಳ ಆಟಾಟೋಪಕ್ಕೆ ಬೆಸತ್ತು ಸಂಸ್ಥೆಯ ಅಡ್ಮಿಷನ್ ಹೆಡ್ ಮಿಥುನ್ ಮಾಧವನ್ ಎಂಬುವವರು ವಿದ್ಯಾರ್ಥಿಗಳ ವಿರುದ್ಧ ದೇವನಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿರುವ ಬಿಲಾಲ್, ಜಿರಲ್, ಮಿಶಾಲ್, ಅರ್ಜುನ್, ಎಡ್ವಿನ್, ಆಂಟೋನಿ, ಸರನ್ ಸೇರಿದಂತೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.


