Latest

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ಯಾಂಡಲ್ ವು ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಸೆ.4, 2021ರಂದು ಬಂಧಿಸಿದ್ದರು. ಸೆ.14ರಂದು ರಾಗಿಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಹಲವುಬಾರಿ ಹೈಕೋರ್ಟ್ ಗೆ ನಟಿ ರಾಗಿಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಜಾಮೀನು ತಿರಸ್ಕರಿಸಿತ್ತು.

Home add -Advt

ಇದನ್ನು ಪ್ರಶ್ನಿಸಿ ರಾಗಿಣಿ ಪರ ವಕೀಲರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್ ರಾಗಿಣಿಗೆ ಜಾಮೀನು ಮಂಜೂರು ಮಾಡಿದ್ದು, 140 ದಿನಗಳ ಸೆರೆವಾಸದ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಂತಾಗಿದೆ.

Related Articles

Back to top button