ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ರಾಹುಲ್ ದ್ರಾವಿಡ್ ಬೆಂಗಳೂರಿನ ರಸ್ತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿದೆ. ಬೆಂಗಳೂರು ಟ್ರಾಫಿಕ್ ನಲ್ಲಿ ಕಾರು ಚಲಾಯಿಸುವ ವೇಳೆ ದ್ರಾವಿಡ್ ಅವರ ಕಾರಿಗೆ ಸಣ್ಣ ಅಪಘಾತವಾಗಿದೆ.
ಟಾಟಾ ಏಸ್ ಗಾಡಿಯ ಚಾಲಕನೊಬ್ಬ ಸಡನ್ ಆಗಿ ಬ್ರೇಕ್ ಹಾಕಿದ ಕಾರಣ ರಾಹುಲ್ ದ್ರಾವಿಡ್ ಅವರ ಕಾರಿಗೆ ಹಿಂದಿನಿಂದ ಆಟೋ ಬಂದು ಟಚ್ ಆಗಿದೆ. ಈ ವೇಳೆ ಕಾರಿನಿಂದ ಇಳಿದ ದ್ರಾವಿಡ್ ಆ ಚಾಲಕನೊಂದಿಗೆ ಕನ್ನಡದಲ್ಲೇ ಮಾತನಾಡಿದ್ದಾರೆ.
ಈ ಘಟನೆಯ ಬಗ್ಗೆ ಹೆಚ್ಚೇನು ವಾದಿಸದ ರಾಹುಲ್ ದ್ರಾವಿಡ್, ತಮ್ಮ ಕಾರಿಗೆ ಏನಾಗಿದೆ ಎಂಬುದನ್ನು ಪರಿಶೀಲಿಸಿದ್ದಾರೆ. ಆ ನಂತರ ಅಲ್ಲಿಂದ ತೆರಳಿದ್ದಾರೆ. ಇಂಡಿಯನ್ ಎಕ್ಸ್ ಪ್ರೆಸ್ ನಿಂದ ಹೈ ಗ್ರೌಂಡ್ಸ್ ಕಡೆಗೆ ತೆರಳುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಸದ್ಯ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ