*ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಆರಂಭ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಬೆಂಗಳೂರಿಗೆ ಆಗಮಿಸಿದ್ದು, ಚುನಾವಣಾ ಅಕ್ರಮದ ವಿರುದ್ಧ ಸಿಡಿದೆದ್ದಿದ್ದಾರೆ.
ಬೆಂಗಳೂರಿನ ಫ್ರೀಂ ಡಂ ಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಹೆಸರಿನಲ್ಲಿ ಕಾಂಗ್ರೆಸ್, ಚುನಾವಣಾ ಅಕ್ರಮದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನಾ ಸಮಾವೇಶದ ವೇದಿಕೆಯಲ್ಲಿ ಮಾತನಾಡುತ್ತಿರುವ ರಾಹುಲ್ ಗಾಂಧಿ, ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 14-15 ಸೀಟು ಗೆಲ್ಲುವ ನಿರೀಕ್ಷೆ ಇತ್ತು. ಆದರೆ ನಾವು ಗೆದ್ದಿದ್ದು ಕೇವಲ 9 ಸೀಟುಗಳು ಮಾತ್ರ. ಇದರ ಕಾರಣ ತಿಳಿಯಲು ಮುಂದಾದಾಗ ಲೋಕಸಸಭಾ ಚುನಾವಣೆಯ ವೇಳೆ ಭಾರಿ ಮತಗಳ್ಳತನ ನಡೆದಿದೆ ಎಂಬುದು ಬಯಲಾಯಿತು. ಕರ್ನಾಟಕ ರಾಜ್ಯದ ಲೋಕಸಭಾ ಚುಅನವಣೆ ಆಂತರಿಕ ಸಮೀಕ್ಷೆ ವೇಳೆ ಮಹದೇವಪುರದಲ್ಲಿ ನಡೆದಿರುವ ಚುನಾವಣಾ ಅಕ್ರಮ ಸ್ಪಷ್ಟವಾಗಿದೆ. ಅದರಲ್ಲಿಯೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರದಲ್ಲಿ ಹಲವು ಮತಗಟ್ಟೆಗಳಲ್ಲಿ ಅಕ್ರಮ ನಡೆದಿದೆ. ಮಹದೇವಪುರದಲ್ಲಿ 6.5 ಲಕ್ಷ ಮತಗಳಿತ್ತು. ಅದರಲ್ಲಿ 1 ಲಕ್ಷ ಮತಗಳನ್ನು ಬಿಜೆಪಿ ಹಾಗೂ ಚುನಾವಣಾ ಆಯೋಗ ಕಳುವು ಮಾಡಿದೆ ಎಂದು ಆರೋಪಿಸಿದ್ದಾರೆ.