ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರು ನಾಳೆ ಬೆಳಗ್ಗೆ 10.30 ಕ್ಕೆ ಕಾವೇರಿ ಭವನ ಹಿಂಭಾಗದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ನಂತರ 11.30 ಕ್ಕೆ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಪಸ್ಥಿತರಿರುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ