Kannada NewsKarnataka NewsLatestPolitics
*ರಾಹುಲ್ ಗಾಂಧಿ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ *

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ವಿಪಕ್ಷ ನಾಯಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ತಮಿಳುನಾಡಿನಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಆಗಮಿಸಿರುವ ರಾಹುಲ್ ಗಾಂಧಿ, ಮೈಸೂರಿನ ವಿಮಾನ ನಿಲ್ದಾಣ ಮೂಲಕವಾಗಿ ತೆರಳಿದ್ದಾರೆ. ಈ ವೇಳೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.

ಬಳಿಕ ರಾಹುಲ್ ಗಾಂಧಿ ಮೈಸೂರು ಏರ್ ಪೋರ್ಟ್ ಮೂಲಕವಾಗಿ ತಮಿಳುನಾಡಿನ ಊಟಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದರು.


