*ರಾಹುಲ್ ಗಾಂಧಿಗೆ ಮತ್ತೆ ಎರಡು ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಮತಗಳ್ಳತನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಮತ್ತೆ ಎರಡು ನೋಟಿಸ್ ನೀಡಿದೆ. ಮಹಾರಾಷ್ಟ್ರ ಹಾಗೂ ಹರಿಯಾಣ ಚುನಾವಣಾ ಆಯೋಗ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿವೆ. ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರಿ ನೋಟಿಸ್ ನೀಡಲಾಗಿದೆ. ಈಗಾಗಲೇ ಕರ್ನಾಟಕ ಚುನಾವಣಾ ಆಯೋಗ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿತ್ತು. ಇದೀಗ ಮಹಾರಾಷ್ಟ್ರ ಹಾಗೂ ಹರಿಯಾಣ … Continue reading *ರಾಹುಲ್ ಗಾಂಧಿಗೆ ಮತ್ತೆ ಎರಡು ನೋಟಿಸ್ ಜಾರಿ*