National

*ಬಾಬಾ ಸಿದ್ದಿಕಿ ಹತ್ಯೆಗೆ ರಾಹುಲ್ ಗಾಂಧಿ ಕಿಡಿ*

ಪ್ರಗತಿವಾಹಿನಿ ಸುದ್ದಿ: ಇಫ್ತಾರ್ ಕೂಟ ಹಾಗೂ ಅದ್ದೂರಿ ಪಾರ್ಟಿಗಳನ್ನು ಆಯೋಜಿಸುವ ಮೂಲಕ ಹೆಸರುವಾಸಿಯಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಇದೇ ವಿಚಾರಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. 

ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ರಾಹುಲ್ ಗಾಂಧಿ, ಶಿವಸೇನೆ-ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ನಾಗರೀಕರಿಗೆ ಶಾಂತಿ ಇಲ್ಲ. ಸಿದ್ದಿಕಿ ಹತ್ಯೆ ನಿಜಕ್ಕೂ ಶೋಚನೀಯ ಹಾಗೂ ನಾವೆಲ್ಲರೂ ತಲೆತಗ್ಗಿಸಬೇಕಾದ ವಿಚಾರ ಎಂದು ರಾಹುಲ್ ಗಾಂಧಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಶನಿವಾರ ರಾತ್ರಿ 9.30 ಗಂಟೆ ಸುಮಾರಿಗೆ ಬಾಬಾ ಸಿದ್ದಿಕಿ ಅವರ ಮೇಲೆ ಮೂರು ಬುಲೆಟ್‌ಗಳನ್ನು ಹಾರಿಸಲಾಗಿತ್ತು. ಅವರ ಮಗ ಜೀಶನ್ ಸಿದ್ದಿಕಿ ಅವರ ಕಚೇರಿಯಲ್ಲಿ ಈ ದಾಳಿ ನಡೆದಿತ್ತು. ಜೀಶನ್ ಬಾಂದ್ರಾ ಪೂರ್ವದ ಶಾಸಕರಾಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button