Karnataka NewsLatestPolitics

*ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ಮತಗಳ್ಳತನದ ವಿರುದ್ಧ ಪ್ರತಿಭಟನೆಗೆ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಬೆಂಗಳೂರಿನ ಹೆಚ್.ಎ.ಎಲ್ ಏರ್ ಪೋರ್ಟ್ ಗೆ ಆಗಮಿಸಿದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.,ಶಿವಕುಮಾರ್ ಸ್ವಾಗತಿಸಿದರು.

ಮತಗಳ್ಳತನ, ಚುನಾವಣಾ ಅಕ್ರಮ ಖಂಡಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದು, ರಾಹುಲ್ ಗಾಂಧಿ ಅಹಗೂ ಮಲ್ಲಿಕಾರ್ಜುನ ಖರ್ಗೆ ಫ್ರೀಡಂ ಪಾರ್ಕ್ ಗೆ ತೆರಳಲಿದ್ದಾರೆ. ರಾಹುಲ್ ಗಾಂಧಿ ಆಗಮನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

Home add -Advt


Related Articles

Back to top button