Karnataka NewsLatest

ರಾಹುಲ್ ಗಾಂಧಿ ತುಮಕೂರು ಭೇಟಿ: ಕೆಪಿಸಿಸಿ ಮುಖಂಡರ ಜೊತೆ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಉಪಸ್ಥಿತಿ

 

ಪ್ರಗತಿವಾಹಿನಿ ಸುದ್ದಿ, ತುಮಕೂರು: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಗುರುವಾರ, ಎಐಸಿಸಿಯ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಗಾಂಧಿ ಹಾಗೂ ಪಕ್ಷದ ಮುಖಂಡರೊಂದಿಗೆ ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಪ್ರತಿಮೆಗೆ ನಮಸ್ಕರಿಸಿ, ಗೌರವವನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮಠದ ಮಠಾಧೀಶರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.

Home add -Advt

ಈ ಸಂದರ್ಭದಲ್ಲಿ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪಸಿಂಗ ಸುರಜೆವಾಲಾ, ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಪಕ್ಷದ ಎಲ್ಲ ಹಿರಿಯ‌ ಮುಖಂಡರು ಉಪಸ್ಥಿತರಿದ್ದರು.

ಶ್ರೀ ವಿಠ್ಠಲ ರುಕ್ಮಿಣಿ ಮಂದಿರ ಸ್ಲ್ಯಾಬ್ ಪೂಜೆ ನೆರವೇರಿಸಿದ ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button