Kannada NewsLatestPolitics

*ರಾಹುಲ್ ಗಾಂಧಿಗೆ ಸಂಕಷ್ಟ; ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, 2 ವರ್ಷ ಜೈಲು ಶಿಕ್ಷೆ ತೀರ್ಪು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.

ಮಾರ್ಚ್ 23ರಂದು ರಾಹುಲ್ ಗಾಂಧಿಯವರಿಗೆ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಾಲಯ ರಾಹುಲ್ ಗಾಂಧಿ ಅರ್ಜಿ ವಜಾಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಎಲ್ಲಾ ಮುಖಂಡರು, ಕಾರ್ಯಕರ್ತರಿಗೆ ಕಾಂಗ್ರೆಸ್ ಕೇಂದ್ರ ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button