ಪ್ರಗತಿವಾಹಿನಿ ಸುದ್ದಿ: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂದ್ಜಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ವಿರುದ್ಧ 40% ಕಮಿಷನ್ ಹಾಗೂ ಭ್ರಷ್ಟಾಚಾರದ ರೇಟ್ ಕಾರ್ಡ್ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡಿದ್ದಾರೆ ಎಂದು ಬಿಜೆಪಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಸಿತ್ತು.
ಇದೀಗ ಈ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂದು ಖುದ್ದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಹಾಜರಾದರು. ಈ ವೇಳೆ ರಾಹುಲ್ ಗಾಂಧಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಬಂಡ್ ಗಳಿಗೆ ಸಹಿ ಮಾಡಿದ್ದಾರೆ. ವಿಚಾರಣೆಯನ್ನು ಕೋರ್ಟ್ ಜೂನ್ 30ಕ್ಕೆ ಮುಂದೂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ