
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಗೆ ಎರಡು ದಿನ ಮಾತ್ರ ಬಾಕಿಯಿದ್ದು, ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ರಾಜಕೀಯ ಪಕ್ಷಗಳ ರಾಷ್ಟ್ರೀಯ ನಾಯಕರು ರಾಜ್ಯದಲ್ಲಿ ಬೀಡು ಬಿಟ್ಟಿದ್ದು, ಮತದಾರರ ಮನವೊಲಿಸಲು ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಧಾನಿ ಬೆಂಗಳುರಿನಲ್ಲಿ ಜನಸಾಮಾನ್ಯರ ಜೊತೆ ಕಾಫಿ ಕುಡಿದು, ಬಿಎಂಟಿಸಿ ಬಸ್ ನಲ್ಲಿ ಸಂಚರಿಸಿ ಗಮನ ಸೆಳೆದಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಸವಿದ ರಾಹುಲ್ ಗಾಂಧಿ, ಬಳಿಕ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದು ವಿಶೇಷವಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ