ಪ್ರಗತಿವಾಹಿನಿ ಸುದ್ದಿ; ವಾಷಿಂಗ್ಟನ್: ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಬರೆದಿರುವ ಎ ಪ್ರಾಮಿಸ್ಡ್ ಲ್ಯಾಂಡ್ ಎಂಬ ತಮ್ಮ ಆತ್ಮಚರಿತ್ರೆಯಲ್ಲಿ ಭಾರತದ ಇಬ್ಬರು ರಾಜಕಾರಣಿಗಳ ಬಗ್ಗೆ ಉಲ್ಲೇಖಿಸಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಯ ವಿದ್ಯಾರ್ಥಿಯಂತೆ ಭಾಸವಾಗುತ್ತಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿಗೆ ವಿಷಯದ ಬಗ್ಗೆ ಪರಿಣತಿ ಕಡಿಮೆಯಿದ್ದು, ಗೊಂದಲದಲ್ಲಿರುವವರಂತೆ ಕಾಣುತಾರೆ. ರಾಜಕೀಯವಾಗಿ ಪ್ರಭಾವ ಬೀರಲು ಉತ್ಸುಕರಾಗಿದ್ದಾರೆ ಆದರೆ ವಿದ್ಯಾರ್ಥಿಯೊಬ್ಬ ಹೇಳಿದ ಪಾಠವನ್ನು ಅಚ್ಚುಕಟ್ಟಾಗಿ ಮುಗಿಸಿ, ಶಿಕ್ಷಕನನ್ನು ಮೆಚ್ಚಿಸಲು ಉತ್ಸುಕನಾಗಿರುವಂತೆ ಕಂಡುಬರುತ್ತಾರೆ ಎಂದು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಓರ್ವ ಭಾವನಾತ್ಮಕ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವವುಳ್ಳವರಾಗಿದ್ದಾರೆ ಎಂದು ಬರೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ