Kannada NewsKarnataka NewsLatest
ಯುವನಿಧಿ ಯೋಜನೆಯಡಿ ಪದವೀಧರರಿಗೆ ಭ್ಯತ್ಯೆ; ಮತ್ತೊಂದು ಗ್ಯಾರಂಟಿ ಯೋಜನೆ ಘೋಷಿಸಿದ ರಾಹುಲ್ ಗಾಂಧಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಂಗ್ರೆಸ್ ನ 4ನೇ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ ರಾಹುಲ್ ಗಾಂಧಿ ಯುವಕರಿಗೆ ಯುವನಿಧಿ ಯೋಜನೆಯಡಿ ಭತ್ಯೆ ನೀಡುವುದಾಗಿ ತಿಳಿಸಿದ್ದಾರೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಯುವಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯುವನಿಧಿ ಹೆಸರಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3000 ರೂಪಾಯಿ ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ ನೀಡುವುದಾಗಿ ಘೋಷಿಸಿದರು.
ಇದೇ ವೇಳೆ ಕಾಂಗ್ರೆಸ್ ಪ್ರಣಾಳಿಕೆಯ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ