Latest

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕ್ಷಣ ಕ್ಷಣಕ್ಕೂ ಆತಂಕವನ್ನು ಹೆಚ್ಚಿಸುತ್ತಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಸ್ವತ: ರಾಹುಲ್ ಗಾಂಧಿ ಮಾಹಿತಿ ನೀಡಿದ್ದು, ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾವು ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದು, ಇದೀಗ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಸುರಕ್ಷತವಾಗಿರಿ ಎಂದು ಮನವಿ ಮಾಡಿದ್ದಾರೆ.
ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ -ಆದೇಶದ ಪ್ರಮುಖ ಅಂಶಗಳು ಇಲ್ಲಿವೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button