Kannada NewsLatestNational

*ಭೀಕರ ಭೂಕುಸಿತ: ಮೂವರು ಸಾವು; ಹಲವರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಗೆ ಭೀಕರ ಭೂ ಕುಸಿತ ಸಂಭವಿಸಿ ಮೂವರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಕೇರಳದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಭೂಕುಸಿತಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಮಣ್ಣಿನಡಿ ಸಿಲುಕಿಕೊಂಡಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಡುಕ್ಕಿ ಜಿಲ್ಲೆಯ ಕೂಡಯತ್ತೂರು ಸಮೀಪದ ಆದೂರ್ಮಲ ಪ್ರದೇಶದಲ್ಲಿ ಮುಂಜಾನೆ ಭೂಕುಸಿತ ಸಂಭವಿಸಿ ಸುಮತಿ ಎಂಬುವವರು ಮೃತಪಟ್ಟಿದ್ದಾರೆ. ಭೂಕುಸಿತದ ಅವಶೇಷಗಳು ಮನೆಯ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಅವರ ಪತಿ ಹಾಗೂ ಪುತ್ರನನ್ನು ರಕ್ಷಿಸಿದ್ದು, ಇಬ್ಬರಿಗೂ ಗಾಯಗಳಾಗಿವೆ. ಅವರನ್ನು ತೊಡುಪುಳದ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಎನ್‌ಡಿಆರ್‌ಎಫ್, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ, ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಸುಮತಿ ಅವರ ಮೃತದೇಹ ಪತ್ತೆಯಾಗಿದೆ. ಭೂಕುಸಿತದಿಂದ ಕುಟುಂಬದ ಮನೆ ಸಂಪೂರ್ಣ ಹಾನಿಗೊಳಗಾಗಿದೆ.

ಇದೇ ವೇಳೆ ಕೊಟ್ಟಾಯಂ ಜಿಲ್ಲೆಯ ಪೂಂಜಾರ್‌ನ ಪಯ್ಯನಿತೊಟ್ಟಂನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಜೋಹ್ನಿ ಅವರ ಪುತ್ರ ಜೋಸೆಫ್ ಮೃತಪಟ್ಟಿದ್ದಾರೆ. ಭೂಕುಸಿತದ ಅವಶೇಷಗಳಡಿ ಅವರ ತಾಯಿ ಸಿಲುಕಿರುವ ಶಂಕೆಯಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ. ಜೋಸೆಫ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಗಾಯಗಳಿಂದ ಮೃತಪಟ್ಟಿದ್ದಾರೆ.

ಇಡುಕ್ಕಿ ಜಿಲ್ಲೆಯ ವಾಗಮನ್ ಪ್ರದೇಶದಲ್ಲೂ ಮತ್ತೊಂದು ಭೂಕುಸಿತ ಸಂಭವಿಸಿದ್ದು, ವೈಕಂ ಮೂಲದ ಪ್ರಭಾಕರನ್ ನಾಯರ್ ಮೃತಪಟ್ಟಿದ್ದಾರೆ. ಸಂಬಂಧಿಕರ ಮನೆಯಲ್ಲಿ ಮಲಗಿದ್ದ ವೇಳೆ ಭೂಕುಸಿತ ಸಂಭವಿಸಿದ್ದು, ಹಲವು ಗಂಟೆಗಳ ಶೋಧದ ಬಳಿಕ ಅವರ ಮೃತದೇಹ ಪತ್ತೆಯಾಗಿದೆ.
Kerala, landslide,3 people death,heavy rain
…….
ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ಪಟ್ಟಿ ರವಾನಿಸುವುದಾಗಿ ತಿಳಿಸಿದ ವರಿಷ್ಠರು: ಆಗಸ್ಟ್ 3ರಂದು ನೂತನ ಸಚಿವರ ಪ್ರಮಾಣವಚನ?

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸಿಎಂ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್, ಕೆ.ಸಿ ವೇಣುಗೋಪಾಲ್, ಸುರ್ಜೆವಾಲ ಭಾಗಿಯಾಗಿದ್ದರು. ನೂತನ ಸಚಿವರ ಪಟ್ಟಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇನ್ನೆರಡು ದಿನಗಳಲ್ಲಿ ಪಟ್ಟಿ ರವಾನಿಸುವುದಾಗಿ ವರಿಷ್ಠರು ತಿಳಿಸಿದ್ದಾರೆ ಎನ್ನಲಾಗಿದೆ.

ಸಭೆ ಅಂತ್ಯವಾಗಿದ್ದು, ಸಿಎಂ ಡಿ.ಕೆ ಶಿವಕುಮಾರ್ ನಾಲ್ಕು ದಿನಗಳ ಬಳಿಕ ಇಂದು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಆದರೆ ನೂತನ ಸಚಿವ ಪಟ್ಟಿ ಮಾತ್ರ ಇನ್ನೂ ನಿಗೂಢವಾಗಿದೆ.

ರಾಹುಲ್ ಗಾಂಧಿ ಅವರು ರಾಜ್ಯ ನಾಯಕರೊಂದಿಗಿನ ಸಭೆ ಬಳಿಕ ಖರ್ಗೆ, ಸುರ್ಜೆವಾಲ, ವೇಣುಗೋಪಾಲ್ ಜೊತೆ ಚರ್ಚೆ ಮುಂದುವರೆಸಿದ್ದು, ಪಟ್ಟಿ ಫೈನಲ್ ಮಾಡಿ ಭಾನುವಾರ ರಾತ್ರಿ ರವಾನಿಸುವ ಸಾಧ್ಯತೆಗಳಿವೆ. ಅಥವಾ ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಅಂತಿಮ ಪಟ್ಟಿಯೊಂದಿಗೆ ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಂಪುಟ ವಿಸ್ತರಣೆ ಸಂಬಂಧ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿದ್ದ ಸಿಎಂ ಡಿಕೆ ಶಿವಕುಮಾರ್ ಇಂದು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದು, ಆಗಸ್ಟ್ 3ರಂದು ಸೋಮವಾರ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Related Articles

Back to top button