ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರವಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಡಿ ಕಚೇರಿಗೆ ಹಾಜರಾಗಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಯವರಿಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಇದೀಗ ರಾಹುಲ್ ಗಾಂಧಿ, ದೆಹಲಿಯ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಡಿ ಕಚೇರಿಗೆ ಹಾಜರಾಗಿದ್ದು ವಿಚಾರಣೆ ಎದುರಿಸಿದ್ದಾರೆ.
ಮೂವರು ಅಧಿಕಾರಿಗಳು ರಾಹುಲ್ ಗಾಂಧಿಯವರ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಇಡಿ ಸಮನ್ಸ್ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಶಾಸಕ ಅನಿಲ್ ಬೆನಕೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ