*ರಾಹುಲ್ ಗಾಂಧಿ ಬೆಂಗಾವಲು ವಾಹನ ಸರಣಿ ಅಪಘಾತ*

ಪ್ರಗತಿವಾಹಿನಿ ಸುದ್ದಿ; ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನ (ಕಾನ್ವಾಯ್) ಸರಣಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ಹಲಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲೋಮೀಟರ್ ಸಂಖ್ಯೆ 91ರ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ದೆಹಲಿಯಿಂದ ಲಖನೌ ತಲುಪಿದ್ದ ರಾಹುಲ್ ಗಾಂಧಿ ಅವರು ಅಲ್ಲಿಂದ ಸುಲ್ತಾನ್‌ಪುರದ ಎಂಪಿ-ಎಮ್‌ಎಲ್‌ಎ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾನ್ವಾಯ್‌ನ ಮುಂಭಾಗದ ವಾಹನವು … Continue reading *ರಾಹುಲ್ ಗಾಂಧಿ ಬೆಂಗಾವಲು ವಾಹನ ಸರಣಿ ಅಪಘಾತ*