Kannada NewsNationalPolitics

*ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸುಲ್ತಾನ್‌ಪುರದ ವಿಶೇಷ ಎಂಪಿ-ಎಂಎಲ್‌ಎ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಕೇಸ್ ನ್ನು ಉತ್ತರ ಪ್ರದೇಶದ ಸುಲ್ತಾನ್‌ಪುರದ ವಿಶೇಷ ಕೋರ್ಟ್ ಖುಲಾಸೆಗೊಳಿಸಿದೆ.

2018ರಲ್ಲಿ ಬಿಜೆಪಿ ಅಧ್ಯಕ್ಷ, ಹಾಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದರೆನ್ನಲಾದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಿಶೇಷ ಎಂಪಿ-ಎಂಎಲ್‌ಎ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

2018ರ ಮೇ 8ರಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದರು ಎಂದು ಆರೋಪಿಸಲಾಗಿದೆ. ಸುಲ್ತಾನ್‌ಪುರ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ವಿಜಯ್ ಮಿಶ್ರಾ ಅವರು 2018ರ ಆಗಸ್ಟ್ 4 ರಂದು ರಾಹುಲ್ ಗಾಂಧಿ ವಿರುದ್ಧ ಸುಲ್ತಾನ್‌ಪುರ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button