Latest

*ಕೋಲಾರದಲ್ಲಿ ನಡೆಯಬೇಕಿದ್ದ ರಾಹುಲ್ ಗಾಂಧಿ ಸಮಾವೇಶ ದಿಢೀರ್ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿಯಿದ್ದು, ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಕಸರತ್ತು ನಡೆಸಿವೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುವ ಕಾರ್ಯಕ್ರಮದಲ್ಲಿ ದಿಢೀರ್ ಬದಲಾವಣೆಯಾಗಿದೆ.

ಏಪ್ರಿಲ್ 10ರಂದು ರಾಹುಲ್ ಗಾಂಧಿ ಕೋಲಾರಕ್ಕೆ ಭೇಟಿ ನೀಡಲಿದ್ದರು. ಆದರೆ ರಾಹುಲ್ ಕಾರ್ಯಕ್ರಮ ದಿಢೀರ್ ಮುಂದೂಡಲಾಗಿದೆ. ರಾಹುಲ್ ಗಾಂಧಿ ಅವರ ಕಾರ್ಯಕ್ರಮ ಎರಡನೆ ಬಾರಿ ಮುಂದೂಡಿಕೆಯಾದಂತಾಗೆದೆ.

ಏಪ್ರಿಲ್ 10ರ ಬದಲಾಗಿ ಏಪ್ರಿಲ್ 16ರಂದು ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.


https://pragati.taskdun.com/karnatakaheavy-rain4-people-death/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button