Latest

ಕಠ್ಮಂಡುವಿನ ನೈಟ್ ಕ್ಲಬ್ ನಲ್ಲಿ ರಾಹುಲ್ ಗಾಂಧಿ; ಪಾರ್ಟಿ ವಿಡಿಯೋ ವೈರಲ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೆರೆ ರಾಷ್ಟ್ರ ನೇಪಾಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಬ್ ನಲ್ಲಿ ಪಾರ್ಟಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಭೂಪೇನ್ ಕುನ್ವರ್ ಎಂಬುವವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ ಎಲ್ ಒಡಿ (ಲಾರ್ಡ್ ಆಫ್ ದಿ ಡ್ರಿಂಕ್ಸ್) ಎಂದು ಬರೆದುಕೊಂಡಿದ್ದಾರೆ. ನೇಪಾಳದ ಕಠ್ಮಂಡುವಿನ ಪಬ್ ನಲ್ಲಿ ರಾಹುಲ್ ಗಾಂಧಿ ಪಾರ್ಟಿಯಲ್ಲಿ ಭಾಗವಹಿಸಿರುವ ಎರಡು ವಿಡಿಯೋಗಳು ವೈರಲ್ ಆಗಿವೆ.

ಒಂದು ವಿಡಿಯೋದಲ್ಲಿ ರಾಹುಲ್ ಗಾಂಧಿ ಪಾರ್ಟಿಯಲ್ಲಿ ಫೋನ್ ನೋಡುತ್ತಿದ್ದರೆ, ಮತ್ತೊಂದು ವಿಡಿಯೋದಲ್ಲಿ ಪಾರ್ಟಿಯಲ್ಲಿ ವಿದೇಶಿ ಮಹಿಳೆಯೊಂದಿಗೆ ಮಾತನಾಡುತ್ತಿದ್ದಾರೆ. ಈ ವಿಡಿಯೋ ಹೊಸ ವಿವಾದಗಳನ್ನು ಸೃಷ್ಟಿಸಿದೆ. ರಾಹುಲ್ ಗಾಂಧಿ ಅಂತರಾಷ್ಟ್ರೀಯ ವೇದಿಕೆಯಲ್ಲಿ ಕಾಂಗ್ರೆಸ್ ಬಲಪಡಿಸುತ್ತಿದ್ದಾರೆ. ಅವರೇ ನಿಜವಾದ ನಾಯಕ ಎಂದು ಒಬ್ಬರು ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದರೆ, ಮತ್ತೊಬ್ಬರು ವಿಡಿಯೋದಲ್ಲಿರುವ ಮಹಿಳೆ ಚೀನಾ ರಾಯಭಾರಿ ಹೌ ಯಾಂಕಿ ಎಂದಿದ್ದಾರೆ.

ವಿಡಿಯೋ ವೈರಲ್ ಬೆನ್ನಲ್ಲೇ ಕಠ್ಮಂಡು ಪೋಸ್ಟ್ ವರದಿ ನೀಡಿದ್ದು, ರಾಹುಲ್ ಗಾಂಧಿ ನೇಪಾಳಕ್ಕೆ ಸುಮ್ನಿಮಾ ಉದಾಸ್ ಎಂಬ ತಮ್ಮ ಸ್ನೇಹಿತನ ವಿವಾಹದಲ್ಲಿ ಭಾಗವಹಿಸಲು ತೆರಳಿದ್ದಾರೆ. ಈ ವೇಳೆ ತಮ್ಮ ಸ್ನೇಹಿತರೊಂದಿಗೆ ಕಠ್ಮಂಡು ಮ್ಯಾರಿಯೇಟ್ ಹೋಟೆಲ್ ನಲ್ಲಿ ತಂಗಿದ್ದಾರೆ ಎಂದು ತಿಳಿಸಿದೆ.

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸ್ಪಷ್ಟನೆ ನೀಡಿದ್ದು, ರಾಹುಲ್ ಗಾಂಧಿ, ತಮ್ಮ ಪತ್ರಕರ್ತ ಸ್ನೇಹಿತನ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಹೋಗಿದ್ದಾರೆ. ಮದುವೆ ಸಮಾರಂಭದಲ್ಲಿ ಭಾಗಿಯಾಗುವುದು ಅಪರಾಧವೇ? ಎಂದು ಪ್ರಶ್ನಿಸಿದ್ದಾರೆ.

https://twitter.com/ajitdatta/status/1521341773125095424?s=20&t=Ql6fCSCfEXLAg9RI-JRn6w
ಬಿಜೆಪಿ ನಾಯಕರ ಜತೆ ಅಮಿತ್ ಶಾ ಸಭೆಯಲ್ಲಿ ಬದಲಾವಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button