
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇದು ವಿಪಕ್ಷಗಳು ಹಾಗೂ ಬಿಜೆಪಿ ವಿರುದ್ಧದ ಹೋರಟವಲ್ಲ, ದೇಶದ ಧ್ವನಿಯನ್ನು ಅಡಗಿಸುತ್ತಿರುವವರ ವಿರುದ್ಧ ಹೋರಾಟವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ವಿಪಕ್ಷ ನಾಯಕರ ಮೈತ್ರಿಕೂಟ (INDIA) ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿಯ ಸಿದ್ಧಾಂತಗಳ ವಿರುದ್ಧ ನಮ್ಮ ಹೋರಾಟ ಎಂದರು.
ಬಿಜೆಪಿಯವರು ದೇಶದ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ದೇಶದ ಜನತೆಗೆ ವಂಚಿಸುತ್ತಿದ್ದಾರೆ ಎಂದು ಕಿಡಿಕಾರಿದರು. ದೇಶದ ಜನರ ಧ್ವನಿಯನ್ನು ಹತ್ತಿಕ್ಕುತ್ತಿರುವವರ ವಿರುದ್ಧ ನಾವು ಸಮರ ಸಾರಿದ್ದೇವೆ. ಅದಕ್ಕಾಗಿ ವಿಪಕ್ಷಗಳ ಒಕ್ಕೂಟಕ್ಕೆ INDIA-ಇಂಡಿಯಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ. ಈ ಸಮರ ಇಂಡಿಯಾ ಹಾಗೂ ಎನ್ ಡಿಎ ನಡುವೆ. ಇಂಡಿಯಾ ಮತ್ತು ಮೋದಿ ವಿರುದ್ಧ ನಡೆಯಲಿದೆ. ಇಂಡಿಯಾ ವಿರುದ್ಧ ಯಾರೇ ಯುದ್ಧ ಸಾರಿದರೂ ಅದರ ಪರಿಣಾಮ ಏನಾಗಲಿದೆ ಎಂಬುದು ನಿಮಗೆ ಗೊತ್ತು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ