Latest

*ಪ್ರಮಾಣವಚನ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ; ಆತ್ಮೀಯವಾಗಿ ಸ್ವಾಗತಿಸಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಕೆಐಎ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯವರನ್ನು ಕೆಪಿಸಿಸಿ ಅಧ್ಯಕ್ಷ, ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಮಧ್ಯಾಹ್ನ 12:30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ಪ್ರಮಾಣವಚನ ಸ್ವೀಕರಿಸಲಿದ್ದು, 8 ಶಾಸಕರು ಕೂಡ ಸಚಿವರಾಗಿ ಪ್ರಮಣವಚನ ಸ್ವೀಕರಿಸಲಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ನಟ-ನಟಿಯರು, ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ.

Home add -Advt
https://pragati.taskdun.com/satish-jarakiholireaction8-ministersoath/

Related Articles

Back to top button