Belagavi NewsBelgaum NewsKannada NewsKarnataka News

*ವಿಶ್ವ ಹಿರಿಯ ನಾಗರಿಕರ ದಿನಾಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2024ರ ಪ್ರಯುಕ್ತ ಶನಿವಾರ (ಸೆ.14) ಎಸ್.ಜಿ.ಬಾಳೆಕುಂದ್ರಿ ಇಂಜನೀಯರಿಂಗ್ ಕಾಲೇಜು ಮೈದಾನದಲ್ಲಿ ಹಿರಿಯಾ ನಾಗರಿಕರಿಗಾಗಿ ಕ್ರೀಡಾ ಸ್ಪರ್ಧೆಗಳನ್ನು ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಗದಗನ ತೋಂಟದಾರ್ಯ ಮಠದ ಪೂಜ್ಯ ಜಗದ್ಗುರು ಶ್ರೀ ಶ್ರೀ ಡಾ.ತೋಂಟದಾರ್ಯ ಸಿದ್ಧರಾಮ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸಿ ಸ್ಪರ್ಧೆಯನ್ನು ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜ ಆರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಎಸ್.ಬಿ.ಸಿದ್ದಾಳ್, ಕರ್ನಾಟಕ ಸ್ಟೇಟ್ ಸೀನಿಯರ್ ಸಿಟಿಜನ್ ಅಸೋಸಿಯೇಶನ್ (ರಿ) ಎನ್.ಜಿ.ಓ. ಅಧ್ಯಕ್ಷರು, ಡಾ. ಬಿ. ಎಂ. ಗೋಮಾಡಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ನಾಮದೇವ ಬಿಲ್ಕರ್ ಉಪಸ್ಥಿತರಿದ್ದರು. ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಸಿಬ್ಬಂದಿಯವರು ಸೇರಿದಂತೆ ನಾಗರಿಕರು ಭಾಗವಹಿಸಿದರು.

Home add -Advt

Related Articles

Back to top button