ಸುಪ್ರೀಂ ತಡೆಯಾಜ್ಞೆ ಬೆನ್ನಲ್ಲೇ ಲೋಕಸಭಾ ಸದಸ್ಯತ್ವ ಪುನಃಸ್ಥಾಪನೆ
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮೋದಿ ಉಪನಾಮದ ಬಗ್ಗೆ ಹೇಳಿಕೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿರುವ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸುಪ್ರೀಂ ಕೋರ್ಟ್ ತಡೆ ಹಿನ್ನೆಯಲ್ಲಿ ರಾಹುಲ್ ಗಾಂಧಿಯವರ ಸಂಸತ್ ಸ್ಥಾನ ಅನರ್ಹ ಆದೇಶವನ್ನು ವಾಪಸ್ ಪಡೆಯಲಾಗಿದ್ದು, ಅವರ ಸದಸ್ಯತ್ವ ಮರು ಸ್ಥಾಪಿಸಲಾಗಿದೆ ಎಂದು ಲೋಕಸಭಾ ಸಕ್ರೆಟರಿಯೇಟ್ ಅಧಿಸೂಚನೆ ಹೊರಡಿಸಿದೆ.
ಕೋರ್ಟ್ ಆದೇಶದ ಬಳಿಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹತೆ ರದ್ದುಗೊಳಿಸುವಂತೆ ಕಾಂಗ್ರೆಸ್ ನಾಯಕರು ಸ್ಪೀಕರ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಅನರ್ಹತೆ ಆದೇಶ ರದ್ದುಗೊಳಿಸಿ ಸ್ಪೀಕರ್ ಆದೇಶ ನೀಡಿದ್ದರು.
ಲೋಕಸಭೆ ಸದಸ್ಯತ್ವ ಅನರ್ಹತೆ ಆದೇಶ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ನಾಳೆ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು, ಮಧ್ಯಾಹ್ನ ಲೋಕಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ