Election NewsKannada NewsKarnataka NewsNationalPolitics

*ಏ.17 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದು, ವಿವಿಧ ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ ಕುಮಾರ್‌ ಸೊರಕೆ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಏ.17 ರಂದು (ಬುಧವಾರ) ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ ರಾಜ್ಯ ಕಾಂಗ್ರೆಸ್ ಪಕ್ಷದ ವರಿಷ್ಠರ ಜೊತೆ ಸಭೆ ನಡೆಸಲಿದ್ದಾರೆ.‌

ಬಳಿಕ ಮಂಡ್ಯ ಜಿಲ್ಲೆಗೆ ತೆರಳಿ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ ಪರ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ. ಅದೆ ದಿನ ಸಂಜೆ ಕೋಲಾರಕ್ಕೆ ತೆರಳಿ ಪಕ್ಷದ ಅಭ್ಯರ್ಥಿ ಕೆ.ವಿ.ಗೌತಮ್‌ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸುವ ಉದ್ಧೇಶ ಇದ್ದು, ಅದು ಇನ್ನೂ ಖಚಿತಗೊಂಡಿಲ್ಲ ಎಂದು ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button