
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ