ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ 2 ವರ್ಷ ಜೈಲುಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರಿಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 2 ವರ್ಷ ಜೈಲುಶಿಕ್ಷೆ ತೀರ್ಪಿಗೆ ಮಧ್ಯಂತರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ, ಸಂಜಯ್ ಕುಮಾರ್ ಸೇರಿದಂತೆ ಸುಪ್ರೀಂ ತ್ರಿಸದಸ್ಯಪೀಠ ರಾಹುಲ್ ಗಾಂಧಿ ಅವರಿಗೆ 2 ವರ್ಷ ಜೈಲುಶಿಕ್ಷೆ ವಿಧಿಸಲು ಯಾವುದೇ ಸೂಕ್ತ ಕಾರಣವನ್ನೂ ನೀಡಿಲ್ಲ. ಆದಾಗ್ಯೂ ರಾಹುಲ್ ಗಾಂಧಿ ಆಪಾದಿತ ಹೇಳಿಕೆಗಳು ಸರಿಯಲ್ಲ. ಸಾರ್ವಜನಿಕ ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದೆ. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ