Kannada NewsKarnataka NewsLatest
*ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಹಾಸನ: ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ.
ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ್ ಹಾಗೂ ಆಲೂರು ತಾಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು.
ಅಪಘಾತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಿಪ್ಪರ್ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿ ಹೊಡೆದಿದ್ದು, ಕಾರು ಮಂಗಳೂರಿನ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




