
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಅಖಾಡ ಕಾವೇರಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ.
ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ಬಳಿಕ ವಿಶೇಷ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆಗೂಡಿ ಮಂಡ್ಯಕ್ಕೆ ತೆರಳಿದರು.

ಮಂಡ್ಯದ ಪಿಇಎಸ್ ಕಾಲೇಜು ಮೈದಾನದ ಹೆಲಿಪ್ಯಾಡ್ ಗೆ ಬಂದಿಳಿದ ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ನಾಯಕರು ಆದರದಿಂದ ಬರಮಾಡಿಕೊಂಡರು. ಮಂಡ್ಯದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿರುವ ರಾಹುಲ್ ಗಾಂಧಿ ಬಳಿಕ ಕೋಲರಕ್ಕೆ ತೆರಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ