Kannada NewsKarnataka NewsLatestPolitics

*ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರ ಪಾರ್ಥಿವಶರೀರಕ್ಕೆ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅಂತಿಮ ನಮನ ಸಲ್ಲಿಸಿದರು.

ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ ಸೂರಜ್ ಹೆಗ್ಡೆ ಡಾಲರ್ಸ್‌ ಕಾಲೋನಿ ನಿವಾಸಕ್ಕೆ ಅಗಮಿಸಿ ಅವರ ಅಂತಿಮ ದರ್ಶನ ಪಡೆದರು. ರಾಹುಲ್‌ ಗಾಂಧಿ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸಾಥ್ ನೀಡಿದರು.

Home add -Advt

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಮತ್ತಿತರರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಸೂರಜ್ ಹೆಗ್ಡೆ ಅವರ ಪತ್ನಿ ಶಿಲ್ಪಾ, ಪುತ್ರರಾದ ಸಮೃಧ್, ವಿಶೃತ್ ಸೇರಿದಂತೆ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದ ಸೂರಜ್ ಹೆಗ್ಡೆ ಅವರಿಗೆ ಜೂನ್‌ 7 ರಂದು ಹೃದಯಾಘಾತ ಸಂಭವಿಸಿತು.ತಕ್ಷಣ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಸೂರಜ್ ಹೆಗ್ಡೆ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

Related Articles

Back to top button