National

*ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ; CWC ಸಭೆಯಲ್ಲಿ ತೀರ್ಮಾನ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ಸೂಕ್ತ ಎಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

CWC ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಹುಲ್ ಗಾಂಧಿಯವರನ್ನು ವಿಪಕ್ಷ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಬಲಿಷ್ಠ ವಿಪಕ್ಷ ಆಗಲು ಕಾಂಗ್ರೆಸ್ ಸಿದ್ಧವಾಗಿದೆ ಎಂದರು.

CWC ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಲೋಕಸಭಾ ಚುನಾವಣೆ ಪ್ರಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ನಮ್ಮ ಹಲವು ನಾಯಕರನ್ನು ಮೋದಿ, ಬಿಜೆಪಿ ಬ್ಲ್ಯಾಕ್ ಮೇಲ್ ಮಾಡಿದರು. ಆದರೂ ನಾವು ಮೋದಿ, ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಿದ್ದೇವೆ. ಪಕ್ಷದ ನಾಯಕರು, ಕಾರ್ಯಕರ್ತರು ಸೈನಿಕರಮ್ತೆ ದೇಶ ರಕ್ಷಣೆಯ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button