*ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಿ: ಯುವ ನಾಯಕ ರಾಹುಲ್ ಜಾರಕಿಹೊಳಿ*
ನೂತನವಾಗಿ ಆಯ್ಕೆಯಾದ ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷರ ಸನ್ಮಾನ ಕಾರ್ಯಕ್ರಮ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನೂತನವಾಗಿ ಆಯ್ಕೆಯಾದ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ಅದಕ್ಕೆ ಬೇಕಾದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು.
ತಾಲೂಕಿನ ಕಡೋಲಿ ಗ್ರಾಮದ ಸಮುದಾಯದ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಡೋಲಿ ಜಿ.ಪಂ ವ್ಯಾಪ್ತಿಯ ಗ್ರಾ.ಪಂ ಹಾಗೂ ಪಿಕೆಪಿಎಸ್ ಸಹಕಾರಿ ಸಂಘಗಳಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದ ಜನ ಮೆಚ್ಚುವಂತ ಅಭಿವೃದ್ಧಿ ಕಾರ್ಯಯನ್ನು ತಂದೆಯವರಾದ ಸಚಿವ ಸತೀಶ್ ಜಾರಕಿಹೊಳಿಯವರು ಮಾಡಿದ್ದಾರೆ. ಚುನಾವಣೆ ವೇಳೆ ನೀವೆಲ್ಲರೂ ಕಾಂಗ್ರೆಸ್ ಗೆಲುವಿಗೆ ಶಕ್ತಿ ತುಂಬಿದ್ದಿರಿ, ಇದರಿಂದ ತಂದೆ ಸತೀಶ್ ಜಾರಕಿಹೊಳಿ ಅವರು ಸಚಿವರಾಗಿದ್ದಾರೆ ಎಂದರು.
ಮತದಾರರು ತೋರಿಸಿದ ಪ್ರೀತಿಗೆ, ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ: ಕಡೋಲಿ ಜಿಪಂ ವ್ಯಾಪ್ತಿಯ ಮತಗಟ್ಟೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದಿರುವುದು ತುಂಬಾ ಸಂತಸವಾಗಿದೆ. ತಳಮಟ್ಟದಿಂದ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಿದ್ದಿರಿ. ನಿಮ್ಮ ಪ್ರಯತ್ನದ ಫಲವೇ ಕಾಂಗ್ರೆಸ್ ಗೆಲುವು ಕಂಡಿದೆ. ಕ್ಷೇತ್ರದ ಪ್ರಜ್ಞಾವಂತ ಮತದಾರರು ತೋರಿಸಿದ ಪ್ರೀತಿಗೆ, ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಮಾಜಿ ಅಧ್ಯಕ್ಷ-ಉಪಾಧ್ಯಕ್ಷರು ಮತದಾರರನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆ ಪರಿಹಾರಕ್ಕೆ ಸಹಕರಿಸಿದರಿಂದ ಇಂದು ತಂದೆಯವರಾದ ಸತೀಶ ಜಾರಕಿಹೊಳಿ ಅವರು ಬಹುಮತ ಅಂತರದಿಂದ ಗೆಲವು ಸಾಧಿಸಿದ್ದಾರೆ. ಗ್ರಾಮಗಳ ಅಭಿವೃದ್ಧಿಗೆ ಸಚಿವ ಸತೀಶ್ ಜಾರಕಿಹೊಳಿ ಅವರಿಂದ ನಿರಂತರ ಸಹಕಾರ ನೀಡಲಾಗುವುದು ಎಂದ ಅವರು, ಮುಂದಿನ ಲೋಕಸಭಾ, ಜಿಪಂ, ತಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಬಲ ತುಂಬಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಡೋಲಿ ದುರದುಂಡೀಶ್ವರ ಮಠದ ಮ.ನಿ.ಪ್ರ ಗುರುಬಸವಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದರು, ಅಣ್ಣು ಕಟಾಂಬಳೆ, ಕೆಪಿಸಿಸಿ ಸದಸ್ಯರಾದ ಮಲಗೌಡ ಪಾಟೀಲ, , ಚಿಕ್ಕೋಡಿ ಎಸ್ ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮ ಗುಳಿ, ಸಾಗರ ಪಿಂಗಟಿ, ಅರುಣ ಕಟಾಂಬಳೆ, ಟಿ ಎಸ್ ಪಾಟೀಲ, ಮಾರುತಿ ಸನದಿ, ಆನಂದ ಪಾಟೀಲ, ಬಸವಂತ ಮಾಯಾನಾಚೆ ಹಾಗೂ ಇತರರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ