
ಪ್ರಗತಿವಾಹಿನಿ ಸುದ್ದಿ: ಮೊಹರಂ ಆಚರಣೆ ವೇಳೆ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬೆಂಕಿಯಲ್ಲಿ ಬಿದ್ದು ಬೆಂದ ಘಟನೆ ನಡೆದಿದೆ.
ರಾಯಚೂರಿನ ಜಿಲ್ಲೆಯ ಲಿಂಗಸಗೂರು ತಾಲೂಕಿನ ಯರಗುಂಟಿಯಲ್ಲಿ ಈ ಘಟನೆ ನಡೆದಿದೆ. ಅಲಾವಿ ಕುಣಿಯಲ್ಲಿ ಬಿದ್ದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಟ್ಟ ಗಾಯಗಳಿಂದ ವ್ಯಕ್ತಿ ಸ್ಥಿತಿ ಚಿಂತಾಜನಕವಾಗಿದೆ.
ಯರಗುಂಟಿ ಗ್ರಾಮದ ಹನುಮಂತ (45) ಗಾಯಾಳು. ಗಾಯಾಳುವನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




