*ಕ್ರೂಸರ್ ವಾಹನದ ಟೈರ್ ಸ್ಫೋಟ: ಮತ್ತೊಂದು ಭೀಕರ ಅಪಘಾತದಲ್ಲಿ ಪಾಠಶಾಲಾ ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬೆಳಂಬೆಳಿಗ್ಗೆ ಎರಡು ಭೀಕರ ಅಪಘಾತಗಳು ಸಂಭವಿಸಿದ್ದು, 14 ಜನರು ಸಾವನ್ನಪ್ಪಿದ್ದಾರೆ. ಯಲ್ಲಾಪುರದಲ್ಲಿ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿದ್ದರೆ, ರಾಯಚೂರಿನಲ್ಲಿ ಕ್ರೂಸರ್ ವಾಹನದ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.
ರಾಯಚೂರಿನ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನದ ಟೈರ್ ಸ್ಫೋಟಗೊಂಡು ವಾಹನ ನಡುರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಮಂತ್ರಾಲಯ ಸಂಸ್ಕೃತ ಪಾಠ ಶಾಲೆಯ ಮೂವರು ವಿದ್ಯಾರ್ಥಿಗಳು ಹಾಗೂ ಕ್ರೂಸರ್ ವಾಹನ ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕ ಶಿವು (24) ವಿದ್ಯಾರ್ಥಿಗಳಾದ ಅಯ್ಯವಂದನ್(18), ಸುಜೇಂದ್ರ (22) ಹಾಗೂ ಅಭಿಲಾಷ್ (20) ಮೃತ ದುರ್ದೈವಿಗಳು. ಘಟನೆಯಲ್ಲಿ 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ