Kannada NewsKarnataka NewsLatest

*ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button