Latest

ಬೆಳಗಾವಿಗೆ ಆಘಾತ ನೀಡಿದ ಲಕ್ಷ್ಮಣ ಸವದಿ

ರಾಯಚೂರಿಗೆ ಏಮ್ಸ್ ತರಲು ಪ್ರಯತ್ನ ಮಾಡುವುದಾಗಿ ಹೇಳಿಕೆ

 

ಪ್ರಗತಿವಾಹಿನಿ ಸುದ್ದಿ; ರಾಯಚೂರು: ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಯೋಜನೆ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಬಳಿಕ ಮಾತನಾಡಿದ ಸಚಿವರು, ರಾಯಚೂರಿನಲ್ಲಿ ವಿಮಾನ ನಿಲ್ದಾಣ ಬರುವದರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು.

ಈಗಾಗಲೇ ಕೇಂದ್ರ ಸರ್ಕಾರ ಐಐಐಟಿ ನೀಡಿದೆ. ಏಮ್ಸ್ ರಾಯಚೂರು ಜಿಲ್ಲೆಗೆ ಬರಬೇಕೆಂದು ನಾನು ಉಸ್ತುವಾರಿ ಸಚಿವನಾಗಿ ಪ್ರಾಮಾಣಿಕ ಪ್ರಯತ್ನ ಮಾಡಲು ಸಿದ್ಧನಿದ್ದೇನೆ ಎಂದರು.

ರಾಯಚೂರು ನಗರದ ಅಭಿವೃದ್ಧಿಗಾಗಿ 100 ಕೋಟಿ ನೀಡಲಾಗಿದೆ. ಮಳೆಗಾಲದ ನಂತರ ಕಾಮಗಾರಿ ಆರಂಭಿಸಲಾಗುವುದು. ಕೊರೊನಾದಿಂದಾಗಿ ಸ್ವಲ್ಪ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಹೇಳಿದರು.

ಸ್ವಂತ ಜಿಲ್ಲೆ ಬೆಳಗಾವಿಗೆ ಯಾವುದೇ ಯೋಜನೆ ತರುವ ಮಾತನ್ನಾಡದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಯಚೂರಿಗೆ ಏಮ್ಸ್ ತರುವುದಾಗಿ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಓರ್ವ ಕೇಂದ್ರ ಸಚಿವ ಹಾಗೂ ರಾಜ್ಯದ ನಾಲ್ವರು ಸಚಿವರಿದ್ದರೂ ಏಮ್ಸ್ ತರುವ ಕುರಿತು ಒಂದೂ ಮಾತನ್ನಾಡಿಲ್ಲ. ಈ ಬಗ್ಗೆ ಪ್ರಯತ್ನವೂ ನಡೆದಿಲ್ಲ. ಇದು ಬೆಳಗಾವಿಗರಿಗೆ ಮತ್ತೊಂದು ದೊಡ್ಡ ಆಘಾತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button