Karnataka NewsLatest

*ರಾಯಚೂರಿನಲ್ಲಿ ವಿಮಾನ ನಿಲ್ದಾಣ: ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ: ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಕುರಿತಂತೆ ಇಂದು ವಿಧಾನ ಸೌಧದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು.

Home add -Advt

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್, ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ. ಬಿ. ಪಾಟೀಲ್‌, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು, ರಾಯಚೂರು ಸಂಸದರಾದ ಕುಮಾರ ನಾಯಕ್, ಮೂಲಭೂತ ಸೌಕರ್ಯ ಇಲಾಖೆ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಚೌಧರಿ, ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕುಮಾರ್ ಉಪಸ್ಥಿತರಿದ್ದರು.

ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಲಾಯಿತು. ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

Related Articles

Back to top button