Kannada NewsKarnataka NewsLatest

*ಕೆ.ಕೆ.ಆರ್.ಟಿ.ಸಿ ಬಸ್ ಹಾಗೂ ಆಟೋ ಭೀಕರ ಅಪಘಾತ: ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದೆ. ಕೆ.ಕೆ.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕರಿಗುಡ್ಡ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮಲ್ಲಪ್ಪ (60) ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋನಮ್ಮ (35) ಅವರನ್ನು ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Home add -Advt

Related Articles

Back to top button