Latest

ಭೀಕರ ಅಪಘಾತ; ಮಗು ಸೇರಿ ಮೂವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ನಾಗರಾಳ ಬಳಿ ನಡೆದಿದೆ.

ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಬೈಕ್ ನಲ್ಲಿದ್ದ ಸವಾರ, ಮಹಿಳೆ ಹಾಗೂ ಮಗು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

Home add -Advt

ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.
ಶಿರಸಿಯಲ್ಲಿ 100.22ರೂಪಾಯಿ ತಲುಪಿದ ಲೀಟರ್ ಪೆಟ್ರೋಲ್ ದರ

Related Articles

Back to top button