ಪ್ರಗತಿವಾಹಿನಿ ಸುದ್ದಿ; ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಡೆಂಘ್ಯೂ ಅಟ್ಟಹಾಸ ಹೆಚ್ಚುತ್ತಿದ್ದು, ಶಂಕಿತ ಡೆಂಘ್ಯೂಗೆ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ಮಕ್ಕಳು ಹಾಗೂ ಓರ್ವ ಯುವಕನನ್ನು ಮಾನ್ವಿ ತಾಲೂಕಿನ ಕ್ಯೂರಿ ಫಾರ್ಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಮೂವರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷವೇ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ.
ಮೂವರೂ ಡೆಂಘ್ಯೂ ನಿಂದ ಬಳಲುತ್ತಿದ್ದರು. ಸೂಕ್ತ ಚಿಕಿತ್ಸೆ ನೀಡದೇ ವೈದ್ಯರು ನಿರ್ಲಕ್ಷ ಮೆರೆದಿದ್ದು, ಮಕ್ಕಳಾದ ನವೀನ್, ದೀಪಾ ಹಾಗೂ ಯುವಕ ವೀರೇಶ್ ಮೂವರು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಎದುರು ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.
ಕಳೆದ 20 ದಿನಗಳಿಂದ ಮಾನ್ವಿಯಲ್ಲಿ ಡೆಂಘ್ಯೂ ಪ್ರಕರಣ ಹೆಚ್ಚುತ್ತಿದೆ. ಆದರೂ ಪುರಸಭೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಈ ಬಗ್ಗೆ ಗಾನಹರಿಸುತ್ತಿಲ್ಲ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿಯೂ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂತ್ರಪಿಂಡ ವೈಫಲ್ಯದಿಂದ ಗುಣವಾಗುವುದು ಹೇಗೆ? ಯಾವ ಜೀವನ ಬದಲಾವಣೆಗಳು ಸಹಾಯ ಮಾಡಬಹುದು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ