ಪ್ರಗತಿವಾಹಿನಿ ಸುದ್ದಿ; ರಾಯಚೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ವಿದ್ಯುತ್ ಸಮಸ್ಯೆಯುಂಟಾಗುತ್ತಿದೆ. ವಿದ್ಯುತ್ ತಂತಿ ಪರಿಶೀಲಿಸಲು ಹೋದಾಗ ಕರೆಂಟ್ ಶಾಕ್ ಹೊಡೆದು ತಂದೆ ಮಗ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಮಹೇಶ(46), ನವೀನ್(16) ಮೃತಪಟ್ಟ ತಂದೆ-ಮಗ. ಇವರನ್ನು ಕಾಪಾಡಲು ಹೋದ ಇನ್ನೋರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಣಾಪಾಯದಿಂದ ಪಾರಾಗಿದ್ದಾನೆ. ಮನೆಯಲ್ಲಿಯೇ ವಿದ್ಯುತ್ ತಂತಿ ಪರಿಶೀಲಿಸಲು ಹೋದಾಗ ಈ ಘಟನೆ ಸಂಭವಿಸಿದೆ.
ಮೊದಲು ವಿದ್ಯುತ್ ತಂತಿ ಪರಿಶೀಲಿಸಲು ತಂದೆ ಮಹೇಶ್ ಹೋಗಿದ್ದಾರೆ ತಂತಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಬರಿಗೊಳಗಾದ ಮಗ ನವೀನ್ ತಂದೆಯನ್ನು ನೋಡಲು ಹೋಗಿ ಆತನಿಗೂ ವಿದ್ಯುತ್ ಸ್ಪರ್ಶಿಸಿದ್ದು, ಆತನೂ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ವೇಳೆ ನವೀನ್ ರಕ್ಷಣೆಗೆ ಬಂದಿದ್ದ ಇನ್ನೋರ್ವ ವ್ಯಕ್ತಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ