ಪ್ರಗತಿವಾಹಿನಿ ಸುದ್ದಿ; ರಾಯಚೂರು: ಹೆಚ್ಚುತ್ತಿರುವ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಾದ್ಯಂತ 21 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಮದ್ಯ ಮಾರಾಟಕ್ಕೆ ಸಂಪೂರ್ಣ ತಡೆಯೊಡ್ಡಲಾಗಿದೆ. ಆದರೆ, ರಾಯಚೂರಿನಲ್ಲಿ ಮಾತ್ರ ಅಕ್ರಮ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ.
ರಾಯಚೂರಿನ ಬಿ ಹನುಮಾಪುರದಲ್ಲಿ ಹರಿ ಎಂಬ ವ್ಯಕ್ತಿ ಮತ್ತು ಆತನ ಸಹಚರರು ಬಹಿರಂಗವಾಗಿಯೇ ಮದ್ಯ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ರಾಯಚೂರಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಂದಲೂ ಸಹ ಜನ ಇಲ್ಲಿಗೆ ಬೈಕ್‌ನಲ್ಲಿ ಆಗಮಿಸಿ ಮದ್ಯ ಖರೀದಿ ಮಾಡುತ್ತಿದ್ದಾರೆ.
ಅಲ್ಲದೇ ಹರಿ ಎಂಬ ವ್ಯಕ್ತಿಯೇ ಬೇರೆಡೆಗೆ ಬೈಕ್‌ನಲ್ಲಿ ಮದ್ಯವನ್ನು ಸಾಗಿಸಿ ಮಾರಾಟ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಹೀಗಾಗಿ ಖಚಿತ ಮಾಹಿತಿ ಮೇರೆಗೆ ನಿನ್ನೆ ಸಂಜೆ ಯರಗೇರಾ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಹರಿ ಪರಾರಿಯಾಗಿದ್ದಾನೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ