Kannada NewsKarnataka NewsLatest

*ಹೀಟ್ ವೇವ್: ರಾಜ್ಯದಲ್ಲಿ ಮತ್ತೋರ್ವ ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸುಡು ಬಿಸಿಲ ಝಳ ಹೆಚ್ಚುತ್ತಿದ್ದು, ಸಾವು-ನೋವಿನ ವರದಿಗಳಾಗುತ್ತಿವೆ. ತಾಪಮಾನ ಹೆಚ್ಚಳ, ಬಿಸಿಲ ಧಗೆಯಿಂದ ಕುಸಿದು ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹುಸೇನಪ್ಪ ಮಡಿವಾಳ್ (45) ಮೃತ ವ್ಯಕ್ತಿ. ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಹುಸೇನಪ್ಪ, ಕೆಲಸ ಮಾಡುತ್ತಿದ್ದಾಗಲೇ ಸುಸ್ತಾಗಿ ಕುಸಿದು ಬಿದ್ದಿದ್ದಾರೆ.

ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಬಿಸಿಲ ಝಳದಿಂದ ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button