Karnataka News

*ಬಳ್ಳಾರಿ ಬಳಿಕ ಈಗ ರಾಯಚೂರು ಸರದಿ: 3 ತಿಂಗಳಲ್ಲಿ 9 ಬಾಣಂತಿಯರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿ ಬಾಣಂತಿಯರ ಸರಣಿ ಸಾವು ಸಂಭವಿಸುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಬಳ್ಳಾರಿ ಬಳಿಕ ಇದೀಗ ರಾಯಚೂರಿನಲ್ಲಿ ಬಾಣಂತಿಯರ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಕಳೆದ ಮೂರು ತಿಂಗಳಲ್ಲಿ 9 ಬಾಣಂತಿಯರು ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಅಕ್ಟೋಬರ್ ನಿಂದ ಈವರೆಗೆ 9 ಬಾಣಂತಿಯರು ಮೃತಪಟ್ಟಿದ್ದಾರೆ.

ಅಕ್ಟೋಬರ್ ತಿಂಗಳಿನಲ್ಲಿ 4, ನವೆಂಬರ್ ನಲ್ಲಿ ನಾಲ್ವರು ಹಾಗೂ ಡಿಸೆಂಬರ್ ನಲ್ಲಿ ಓರ್ವ ಬಾಣಂತಿ ಸೇರಿ ಒಟ್ಟು 9 ಬಾಣಂತಿಯರು ಸಾವನ್ನಪ್ಪಿದ್ದಾರೆ. ಐವಿ ದ್ರಾವಣವೇ ಬಾಣಂತಿಯರ ಸಾವಿಗೆ ಕಾರಣವಾಗುತ್ತಿದೆಯೇ? ಎಂಬ ಶಂಕೆ ವ್ಯಕ್ತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button