ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನರೇಗಾ ಯೋಜನೆ ಅನುಷ್ಠಾನದಲ್ಲಿ ಭಾರಿ ಅವ್ಯವಹಾರ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ. ಈ ಅಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ದೇವದುರ್ಗದಲ್ಲಿ 33 ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ ನಡೆಸಲಾಗಿದ್ದು, ತಾಲೂಕು ಪಂಚಾಯಿತಿ ಹಿಂದಿನ ಇಓ ಪಂಪಾಪತಿ ಹಿರೇಮಠ, ಸಹಾಯಕ ನಿರ್ದೇಶಕ ಬಸಣ್ಣ ನಾಯಕ್ ವಿರುದ್ಧ ದೇವದುರ್ಗ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಜಿಲ್ಲಾ ಪಂಚಾಯತ್ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ನಿರ್ದೇಶನ ಮೇರೆಗೆ ಈಗಿನ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಅಣ್ಣಾರಾಮ್ ದೂರು ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
2020-21 ರಿಂದ 2022-23ವರೆಗೆ ಯೋಜನೆಗಳ ಕುರಿತು ಸಾಮಾಜಿಕ ಪರಿಶೋಧನಾ ನಿರ್ದೇಶಕರು ತನಿಉಖೆ ನಡೆಸಿ ಮಧ್ಯಂತರ ವರದಿ ಸಲ್ಲಿಸಿದ್ದರು. ವರದಿ ಪರಿಶೀಲಿಸಿದಾಗ ಅದರಲ್ಲಿ ಯೋಜನೆಯ ಕಾಮಗಾರಿಗಳ ಅನುಷ್ಠಾನದಲ್ಲಿ ಅಂದಾಜು ಮೊತ್ತಕ್ಕಿಂತ ಹೆಚ್ಚುವರಿಯಾಗಿ 11,64,97,813 ರೂ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೇ 6700 ಪ್ರಕರಣಗಳಲ್ಲಿ 10232.87 ಲಕ್ಷ ಮಾರುತೇಶ್ವರ ಎಂಟರ್ ಪ್ರೈಸಸ್ ಗೆ ನಿಯಮ ಮೀರಿ ನೀಡಲಾಗಿದೆ. 5,10,33,801 ರೂ ತೆರಿಗೆ ಪಾವತಿಸದೇ ಸರ್ಕಾರಕ್ಕೆ ನಷ್ಟ ಉಂಟುಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ಗೆಜೆಟೆಡ್ ಅಧಿಕರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ