Latest

ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಭಾರಿ ಮಳೆ ಅಬ್ಬರದ ಅವಾಂತರಗಳ ನಡುವೆ ರಾಜ್ಯದಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಬಾಲಯ್ಯ ಕ್ಯಾಂಪ್ ಬಳಿ ನಡೆದಿದೆ.

ವೇಗವಾಗಿ ಬಂದ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಮಧ್ಯಪ್ರದೇಶ ಮೂಲದವರು ಎಂದು ತಿಳಿದುಬಂದಿದೆ.

Home add -Advt

ಸ್ಥಳಕ್ಕೆ ಸಿಂಧನೂರು ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಎರಡು ಜೆಸಿಬಿ ಮೂಲಕ ಅಪಘಾತವಾದ ವಾಹನಗಳನ್ನು ತೆರವುಗೊಳಿಸಲಾಗಿದೆ.

ವಿದ್ಯಾರ್ಥಿನಿ ಆತ್ಮಹತ್ಯೆ; ಇಬ್ಬರು ಶಿಕ್ಷಕಿಯರ ಬಂಧನ

Related Articles

Back to top button