Kannada NewsKarnataka NewsLatest

*BREAKING: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ರೈಲಿಗೆ ತಲೆಕೊಟ್ಟು ಬಿಎಸ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ರೈಲ್ವೆ ನಿಲ್ದಾಣದಲ್ಲಿ ಈ ದುರಂತ ನಡೆದಿದೆ. 21 ವರ್ಷದ ಸುಮಂಗಲ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದ ಸುಮಂಗಲ ಬಿಎಸ್ ಸಿ ಓದುತ್ತಿದ್ದಳು.

Home add -Advt

ಇಂದು ಬೆಳಿಗ್ಗೆ ರೈಲು ನಿಲ್ದಾಣಕ್ಕೆ ಬಂದವಳು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button